Connect with us
Ad Widget

ಕೊರೊನಾ

“ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ”

Published

on

ಗೌರಿಬಿದನೂರು : ತಾಲ್ಲೂಕಿನ ಜಿ. ಬೊಮ್ಮಸಂದ್ರ ಗ್ರಾಮದಲ್ಲಿ ಜಿ.ಬೊಮ್ಮಸಂದ್ರ ಗ್ರಾಮ ಪಂಚಾಯಿತಿ ವತಿಯಿಂದ ಕರೋನ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಿರುವಂತಹ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು,ಗ್ರಾಮ ಪಂಚಾಯಿತಿ ಸಿಬ್ಬಂದಿ,ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಗಳ ವಿತರಣೆ ಮಾಡಲಾಯಿತು . ಇದೇ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಾಥ್ ರೆಡ್ಡಿ ,ಉಪಾಧ್ಯಕ್ಷರಾದ ಸೌಭಾಗ್ಯಮ್ಮ ಹಾಗೂ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅಶ್ವತನಾರಾಣಸ್ವಾಮಿ ಹಾಗೂ ಗ್ರಾಮದ ಮುಖಂಡರಾದ ಬಿ.ಜಿ. ವೇಣುಗೋಪಾಲ ರೆಡ್ಡಿ ರವರು ಮತ್ತು ಇನ್ನಿತರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Continue Reading
Advertisement
Click to comment

Leave a Reply

Your email address will not be published. Required fields are marked *

ಕೊರೊನಾ

ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದ ಕುರಿತಂತೆ ವೀಡಿಯೋ ಸಂವಾದ

Published

on

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು – ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಮತ್ತು ಚಿಕ್ಕಮಗಳೂರು – ಈ ಎಂಟು ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದ ಕುರಿತಂತೆ ವೀಡಿಯೋ ಸಂವಾದ ನಡೆಸಿದರು.

ಉಪಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರುಗಳಾದ ಡಾ|| ಕೆ.ಸುಧಾಕರ್, ಅರವಿಂದ ಲಿಂಬಾವಳಿ, ನಾರಾಯಣಗೌಡ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

Continue Reading

ಕೊರೊನಾ

ಕೊರೊನಾ ವಾರಿಯರ್ಸ್ ಗೆ ಯೂಥ್ ಮುಮೆಂಟ್ ಕಡೆಯಿಂದ ಸನ್ಮಾನ

Published

on

ಮಸ್ಕಿ :- ವಿಶ್ವವನ್ನ ತಲ್ಲಣಗೊಳಿಸಿರುವ ಕೋವಿಡ್ – 19 ವಿರುದ್ದ ವೈದ್ಯರು ತಮ್ಮ ಜೀವದ ಹಂಗು ತೊರೆದು ಚಿಕಿತ್ಸೆ ನೀಡುತ್ತಿದ್ದಾರೆ.

ಇಂತಹ ಕೊರೊನಾ ವಾರಿಯರ್ಸ ಗಳಿಗೆ “ಯೂಥ್ ಮುಮೆಂಟ್ ಕಡೆಯಿಂದ” ಸನ್ಮಾನಿಸಿ ಗೌರವ ಸಲ್ಲಿಸಿ ಸಿಹಿ ತಿನ್ನಿಸುವುದರ ಮೂಲಕ ವೈದ್ಯರು ಆತ್ಮಸ್ಥೈರ್ಯವನ್ನ ಹೆಚ್ಚಿಸುವ ಪ್ರಯತ್ನ ಬಳಗನೂರು ಸಾರ್ವಜನಿಕರು ಮಾಡಿದರು.

ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಸಾವಿರಾರು ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.

ಹೀಗೆ ಸಾವಿರಾರು ಜನರು ಕೊರೊನಾ ಸೋಂಕಿಗೆ ತುತ್ತಾಗಿ ಸಾವಿನ ದವಡೆಯಿಂದ ಎದ್ದು ಬರುತ್ತಿರುವುದಕ್ಕೆ ಅದೆಷ್ಟೋ ವೈದ್ಯರು ಸಲ್ಲಿಸುತ್ತಿರುವ ಸೇವೆಯಿಂದ ಹೀಗೆ ತಮ್ಮ ಜೀವದ ಹಂಗನ್ನು ತೊರೆದು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ, ನರ್ಸ್ ಮತ್ತು ವೈದಕೀಯ ಸಿಬ್ಬಂದಿಗಳಿಗೆ ಬಳಗಾನೂರಿನ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಅಬಕಾರಿ ಗುತ್ತೆದರಾರು , ಯೂಥ್ ಮೂಮೆಂಟ್ ಸಂಚಾಲಕ ನಿರುಪಾದಿ.ಎಂ.ಬಿ , ಪ.ಪಂ. ಸದಸ್ಯ ಶ್ರೀ ರಾಜಶೇಖರ , ಶಂಕರ ಬಂಡಿ , ಶಿವು ಮಕಪೂರ್ , ಅನಿಲ್ ಪುಟ್ಟಿ , ಚನ್ನಪ್ಪ ಹಡಪದ್, ಸಂಗಪ್ಪ, ಅಮರೇಶ್, ವೀರೇಶ್, ಚಂದ್ರು, ನವೀದ್, ಮಲ್ಲು ಸಿಂಪಿ, ಬಸವ,ರಮೇಶ್, ಸೋಮು, ಸಿದ್ದು, ಮನೋಜ್, ಇನ್ನೂ ಅನೇಕ ಯುವ ಮಿತ್ರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಿದರು.

ವರದಿ : ದುರ್ಗೇಶ್ ಭೋವಿ ಮಸ್ಕಿ

Continue Reading

ಕೊರೊನಾ

ಬೆಡ್ ಗಳನ್ನು ಉಳಿಸಿಕೊಂಡು ಉಳಿದ ಬೆಡ್ ಗಳನ್ನು ಆಸ್ಪತ್ರೆಯವರಿಗೆ ಹಿಂದಿರುಗಿಸಲು ನಿರ್ಧಾರ

Published

on

ಬೆಂಗಳೂರು : ಸರ್ಕಾರ, ಖಾಸಗಿ ಆಸ್ಪತ್ರೆಗಳಿಂದ ಪಡೆದುಕೊಂಡ ಬೆಡ್ ಗಳ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖಗೊಂಡಿದ್ದು, ಸರ್ಕಾರಿ ಕೋಟಾದಲ್ಲಿ ಸದ್ಯದ ಪರಿಸ್ಥಿತಿಗೆ ಸಾಕಾಗುವಷ್ಟು ಬೆಡ್ ಗಳನ್ನ ಉಳಿಸಿಕೊಂಡು ಉಳಿದ ಬೆಡ್ ಗಳನ್ನ ಕೋವಿಡ್ ಯೇತರ ರೋಗಿಗಳಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಆಸ್ಪತ್ರೆಯವರಿಗೆ ಹಿಂದಿರುಗಿಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಮಾನ್ಯ ಕಂದಾಯ ಸಚಿವರಾದ ಆರ್.ಅಶೋಕ್ ರವರು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಮಂಜುನಾಥ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ, ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್