Connect with us
Ad Widget

ಕೊರೊನಾ

ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದ ಕುರಿತಂತೆ ವೀಡಿಯೋ ಸಂವಾದ

Published

on

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು – ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಮತ್ತು ಚಿಕ್ಕಮಗಳೂರು – ಈ ಎಂಟು ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದ ಕುರಿತಂತೆ ವೀಡಿಯೋ ಸಂವಾದ ನಡೆಸಿದರು.

ಉಪಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರುಗಳಾದ ಡಾ|| ಕೆ.ಸುಧಾಕರ್, ಅರವಿಂದ ಲಿಂಬಾವಳಿ, ನಾರಾಯಣಗೌಡ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

Continue Reading
Advertisement
Click to comment

Leave a Reply

Your email address will not be published. Required fields are marked *

ಕೊರೊನಾ

12 ನೇ ವಾರ್ಡಿನ ನೂರು ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ವಿತರಣೆ

Published

on

ಗೌರಿಬಿದನೂರು : ದಿವಂಗತ ಶ್ರೀಮತಿ ಶ್ರೀ ನಾರಮ್ಮ ಮತ್ತು ಆಲಂಪಲ್ಲಿ ಆದಿನಾರಾಯಣ ಶೆಟ್ಟಿಯವರ
ಸ್ಮರಣಾರ್ಥ ಅವರ ಕುಟುಂಬದವರು ಹಾಗೂ ನಗರಸಭೆಯ 12 ನೇ ವಾರ್ಡಿನ ಸದಸ್ಯರಾಗಿರುವ ಸಹೋದರ ಅಮರನಾಥ್ ಅವರಿಂದ ಇಂದು 12 ನೇ ವಾರ್ಡಿನ ನೂರು ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ವಿತರಿಸುತ್ತಿದ್ದ ಕಾರ್ಯದಲ್ಲಿ ಮಾನ್ಯ ಸ್ಥಳೀಯ ಶಾಸಕರಾದ ಶಿವಶಂಕರರೆಡ್ಡಿ ರವರು ಪಾಲ್ಗೊಂಡು ಕಿಟ್ ವಿತರಣೆ ಮಾಡಿದರು‌.

ನಂತರ ಮಾತನಾಡಿದ ಅವರು, ಇಂತಹ ಜನಪರ ಚಿಂತನೆಗಳು ಇನ್ನಷ್ಟು ಜನರಿಗೆ ಪ್ರೇರಣೆಯಾಗುವುದರ ಜೊತೆಗೆ ಶ್ರೀ ಆದಿನಾರಾಯಣ ಶೆಟ್ಟರ ಕುಟುಂಬದ ಸದಸ್ಯರಿಗೆ ಇನ್ನಷ್ಟು ಜನಪರ ಕಾರ್ಯಕ್ರಮಗಳನ್ನು ಮಾಡುವಂತಹ ಶಕ್ತಿಯನ್ನು ಮಾತೆ ವಾಸವಿ ಕರುಣಿಸುವಂತಾಗಲಿ ಎಂದರು.

Continue Reading

ಕೊರೊನಾ

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆ

Published

on

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಸಭೆಯಲ್ಲಿ ನಿರ್ಧರಿಸಲಾದ ಅಂಶಗಳು

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧ ಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ.

ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
• ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
• ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
• ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
• ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
• ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
• ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

Continue Reading

ಕೊರೊನಾ

ತಾಲೂಕಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆಗೆ ಚಾಲನೆ

Published

on

ಮಸ್ಕಿ :- ಮಸ್ಕಿ ತಾಲೂಕಿನ ಗೌಡನಬಾವಿ ಗ್ರಾಮ ಪಂಚಾಯಿತಿಯಲ್ಲಿ ಕೊರೊನಾ ಲಸಿಕೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಾಲನೆ
ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ರೋಗ ಹತೋಟಿಗೆ ಬಂದಿದೆ. ದೇಶದ ಪ್ರಧಾನಿ ಸೇರಿದಂತೆ ಪ್ರಮುಖರು ಲಸಿಕೆ ಹಾಕಿಸಿಕೊಂಡು ಕೊರೊನಾ ರೋಗ ಹೋಗಲಾಡಿಸುವುದಕ್ಕೆ ಮುಂದಾಗಿದ್ದಾರೆ. ಯಾವುದೇ ಭಯ ಇಲ್ಲದೇ ಇದರ ಸದುಪಯೋಗ ಪಡೆದುಕೊಳ್ಳಬೇಕು ವಿಶ್ವ ಮತ್ತು ದೇಶಾದ್ಯಂತ ಕೊರೊನಾ 2ನೇ ಅಲೆ ಆರಂಭವಾಗಿದೆ. ಆದ್ದರಿಂದ ಎಲ್ಲರೂ ಜಾಗೃತರಾಗಿ ಇರುವುದರ ಜೊತೆಗೆ ಸರಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಅಲ್ಲದೇ, ಯಾವುದೇ ರೀತಿಯ ನಿರ್ಲಕ್ಷ ಮಾಡಬಾರದು. ಸರಕಾರ ನಿಗದಿ ಪಡಿಸಿದ ವಯಸ್ಸಿನವರು ತಪ್ಪದೆ ಕೊರೊನಾ ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದರು.

ಭಾರತದಲ್ಲೇ ಅಭಿವೃದ್ಧಿ ಪಡಿಸಿದ ಕೊರೊನಾ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು ಕೊರೊನಾ ನಿಯಂತ್ರಿಸಲು ಅಗತ್ಯವಿರುವ ಈ ಲಸಿಕೆಯನ್ನು ಎಲ್ಲ ಹಿರಿಯ ನಾಗರಿಕರು ಹಾಗೂ ಅರ್ಹ ವ್ಯಕ್ತಿಗಳು ಪಡೆದುಕೊಳ್ಳಬೇಕು. ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದು ಭಾರತವನ್ನು ಕೊರೊನಾ ಮುಕ್ತವಾಗಿಸಲು ಸಹಕರಿಸಬೇಕು ಎಂದು ನಾಗರಿಕರಲ್ಲಿ ಲಕ್ಷ್ಮಿಕಾಂತ್ ಪಿಡಿಒ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗೌಡನಭಾವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಿಕಾಂತ್, ಗ್ರಾಮ ಲೆಕ್ಕಾಧಿಕಾರಿ ಯೂನಿಸ್ ಖಾನ್, ಅಕ್ಕಮ್ಮ , ಆರೋಗ್ಯ ಸಿಬ್ಬಂದಿಗಳಾದ ಶೋಭಾ, ಉದಯಕುಮಾರ್, ಪಾರ್ವತಿ, ಆಶಾ ಕಾರ್ಯಕರ್ತೆ ಲಕ್ಷ್ಮಿ, ಅಂಗನವಾಡಿ ಕಾರ್ಯಕರ್ತೆ ಸರಸ್ವತಿ, ಅಕ್ಕಮ್ಮ, ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ : ದುರ್ಗೇಶ್ ಭೋವಿ ಮಸ್ಕಿ

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್