ಸುದ್ದಿ
ಖ್ಯಾತ ಕವಿ ಡಾಕ್ಟರ್ ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ
ಸಿಂಧನೂರು :- ಛಲವಾದಿ ಮಹಾಸಭಾ ತಾಲೂಕು ಸಮಿತಿ ವತಿಯಿಂದ ಸಿಂಧನೂರು ನಗರದ ಗಾಂಧಿ ವೃತ್ತದಲ್ಲಿ ಖ್ಯಾತ ಕವಿ ಡಾಕ್ಟರ್ ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾ ತಾಲೂಕ್ ಅಧ್ಯಕ್ಷರಾದ ಡಾಕ್ಟರ್ ರಾಮಣ್ಣ ಗೊನ್ವಾರ್ , ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಬಸವ ಮಲ್ಲಾಪುರ್ , ಹಿರಿಯ ಮುಖಂಡರಾದ ಅಯ್ಯಪ್ಪ ವಕೀಲರು ಮಲ್ಲಾಪುರ್ , ಹನುಮಂತಪ್ಪ ಬೂದಿವಾಳ ವಕೀಲರು , ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಶರಣಬಸವ ಉಮಲೂಟಿ , ಹನುಮಂತ ಗೋಮರ್ಸಿ , ಬಸವರಾಜ್ ಹೊಸಳ್ಳಿ , ನರಸಪ್ಪ ಕಟ್ಟಿಮನಿ , ಅಂಬರೀಶ್ ರಂಗಾಪುರ ಕ್ಯಾಂಪ್ , ನಿರುಪಾದಿ ಸಾಸಲಮರಿ , ದೇವರಾಜ್ ಮಲ್ಕಾಪುರ್ , ಲಿಂಗರಾಜ್ ಹೊಸಳ್ಳಿ , ಲಿಗಂಪ್ಪ ಗೊರೆಬಾಳ್ , ಪಂಪಾಪತಿ ಸಾಸಲಮರಿ , ಹೊನ್ನೂರು ಕಟ್ಟಿಮನಿ , ಹುಲುಗಪ್ಪ ಬಿಎಸ್ಪಿ ಮಲ್ಕಾಪುರ್ ಹಾಗೂ ಛಲವಾದಿ ಸಮಾಜದ ಹಿರಿಯರು ಹಾಗೂ ಯುವಕರು ಭಾಗವಹಿಸಿದ್ದರು.
ವರದಿ : ದುರ್ಗೇಶ್ ಭೋವಿ ಮಸ್ಕಿ
ರಾಜ್ಯ
ಬಡವರು ಮತ್ತು ಕುಂಚ ಕಲಾವಿದರಿಗೆ ಆಸರೆಯಾದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ
ಗೌರಿಬಿದನೂರು : ಕೊರೊನಾ ಮಹಾಮಾರಿಯ ಪರಿಣಾಮವಾಗಿ ಜನತೆ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದು ಅವರ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಬಡ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಾಗಗಳನ್ನು ನೀಡಲು ಮುಂದಾಗಿರುವುದು ಶ್ಲಾಘನೀಯವಾಗಿದೆ ಎಂದು ತಹಸೀಲ್ದಾರ್ ಎಚ್.ಶ್ರೀನಿವಾಸ್ ತಿಳಿಸಿದರು.
ನಗರದಲ್ಲಿ ಮಿನಿ ವಿಧಾನಸೌಧ ಮುಂಭಾಗ ಶನಿವಾರ ಕುಂಚ ಕಲಾವಿದರ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟದಿಂದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಡೀ ಜಿಲ್ಲೆ ಸಂಪೂರ್ಣವಾಗಿ ಲಾಕ್ ಡೌನ್ ಮಾಡಿದ ಬಳಿಕ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ. ಜನರು ಅನಾವಶ್ಯಕವಾಗಿ ಓಡಾಡುವುದನ್ನು ಬಿಟ್ಟು ಸರ್ಕಾರದ ಆದೇಶದಂತೆ ಮನೆಯಲ್ಲೇ ಇದ್ದು ಸೋಂಕಿನ ಸರಪಳಿಯನ್ನು ಕತ್ತರಿಸಲು ಸಹಕಾರಿಯಾಗಬೇಕಿದೆ.
ಗ್ರಾಮೀಣ ಭಾಗದಲ್ಲಿರುವ ಬಡ ಹಾಗೂ ಕಾರ್ಮಿಕ ವರ್ಗದ ಕುಟುಂಬಗಳು ಉದ್ಯೋಗದ ಆಸರೆಯಿಲ್ಲದೆ ನಿತ್ಯದ ಆಹಾರಕ್ಕಾಗಿ ಪರಿತಪಿಸುವಂತಾಗಿದ್ದು, ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಬಡ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ಒದಗಿಸಲು ಬದ್ಧವಾಗಿರುವುದು ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೌಲಭ್ಯಗಳನ್ನು ಪಡೆಯುವ ಮೂಲಕ ಬಡವರ ಹಾಗೂ ಕೂಲಿ ಕಾರ್ಮಿಕರ ಬದುಕಿಗೆ ಬೆನ್ನೆಲುಬಾಗಿ ನಿಲ್ಲಲು ಯೋಜನೆ ಬದ್ಧವಾಗಿದೆ ಎಂದು ಹೇಳಿದರು.
ಮುಖಂಡರಾದ ಎನ್.ಎಂ.ರವಿನಾರಾಯಣರೆಡ್ಡಿ ಮಾತನಾಡಿ, ಇಡೀ ದೇಶ ಕೊರೊನಾ ಸೋಂಕಿನಿಂದ ತತ್ತರಿಸಿದ್ದು ಬಹುತೇಕ ಉದ್ಯಮಗಳು ನೆಲಕ್ಕಚ್ಚಿವೆ. ಇದರಿಂದಾಗಿ ಸಾಮಾನ್ಯ ಜನತೆ ಕೈಯಲ್ಲಿ ಕೆಲಸವಿಲ್ಲದೆ ಒಪ್ಪೊತ್ತಿನ ಊಟಕ್ಕಾಗಿ ಪರಿತಪಿಸುವಂತಾಗಿದೆ. ಇಂತಹ ಸಮಯದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಬಡವರ ಕಷ್ಟಗಳಿಗೆ ಸ್ಪಂಧಿಸುವ ಕಾರ್ಯ ನಿಜವಾಗಿಯೂ ಶ್ಲಾಘನೀಯವಾಗಿದೆ. ಅವರ ಈ ಸೇವಾ ಮನೋಭಾವವು ಸಾವಿರಾರು ಕುಟುಂಬಗಳಿಗೆ ಬೆಳಕಾಗಿದೆ ಎಂದು ಹೇಳಿದರು.
ಇದೇ ವೇಳೆ ನಗರಸಭೆ ಸದಸ್ಯ ಮೋಹನ್, ಮುಖಂಡರಾದ ಬಿ.ಪಿ.ಅಶ್ವತ್ಥನಾರಾಯಣಗೌಡ, ರಾಮಣ್ಣ, ವೇದಲವೇಣಿ ವೇಣು, ಕೆ.ಎಸ್.ಅನಂತರಾಜು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಯೋಜನಾಧಿಕಾರಿ ಎಂ.ಕಲ್ಮೇಶ್, ಯೋಜನೆಯ ವಲಯ ಮೇಲ್ವಿಚಾರಕರಾದ ಅಮೂಲ್ಯ, ಮಲ್ಲಣ್ಣ, ಮೋಹನ್, ಸೇವಾಪ್ರತಿನಿಧಿ ನಾಗರತ್ನ, ಕಂದಾಯ ಇಲಾಖೆಯ ಖಾದರ್, ಎಚ್.ರವಿಕುಮಾರ್, ಅನಿಲ್ ಸೇರಿದಂತೆ ಇತರರು ಭಾಗವಹಿಸಿದ್ದರು.
ವಿಡಿಯೋ
ಪೆಟ್ರೋಲ್, ಡಿಸೇಲ್ ಅಡುಗೆ ಅನಿಲ ಬೆಲೆ ಏರಿಕೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ತಾಳಿಕೋಟೆ :ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹ 100ರ ಗಡಿ ದಾಟಿರುವುದನ್ನು ವಿರೋಧಿಸಿ ಶನಿವಾರ ಕಾಂಗ್ರೆಸ್ ಘಟಕದ ನಾಯಕರು ಹಾಗೂ ಕಾರ್ಯಕರ್ತರು ಪಟ್ಟಣದ
ಪೆಟ್ರೋಲ್ ಬಂಕ್‌ಗಳ ಎದುರು ‘ಪೆಟ್ರೋಲ್ 100 ನಾಟೌಟ್’ ಪ್ರತಿಭಟನಾ ಪ್ರದರ್ಶನ ನಡೆಸಿದರು.
‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರು ಗತಿಯಲ್ಲೇ ಸಾಗಿದೆ.ಕೇಂದ್ರವು ಕೋವಿಡ್ ಸಂಕಷ್ಟದಲ್ಲಿರುವ ಜನಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ’ ಎಂದು ಕಾಂಗ್ರೆಸ್ b s ಪಾಟೀಲ (ಯಾಳಗಿ) ಕೆ. ಪಿ. ಸಿ. ಸಿ ಸದಸ್ಯರು ಬೆಂಗಳೂರು ಕಿಡಿಕಾರಿದರು.
ಈ ಸಂದರ್ಭದಲ್ಲಿ ಸುರೇಶಬಾಬುಗೌಡ. ಬಿರಾದಾರ ಎ. ಪಿ. ಮ. ಸಿ ಸದಸ್ಯರು ತಾಳಿಕೋಟಿ, ಶಿವು ದೇಸಾಯಿ, ಬಸನಗೌಡ ಗಬಸವಳಗಿ, ಪ್ರಭುಗೌಡ ಮದರಕಲ್, g s ಕಶೇಟ್ಟಿ, ಕಾಶಿಂ ಪಟೇಲ್, ಸುರೇಶ್ ಗೌಡ ಬಿರಾದರ್, ವಿಶ್ವನಾಥ್ ನಾಡಗೌಡ, ಜೈಪಾಲ್ ರೆಡ್ಡಿ ಬಂಟನೂರು, ಅಶೋಕ್ ಅಸ್ಕಿ, ಯಮನಪ್ಪ ಬೊಮ್ಮನಹಳ್ಳಿ, ಸಂಗನಗೌಡ ಅಸ್ಕಿ, ಶಂಕರ್ ಕಟ್ಟಿಮನಿ, ಇನ್ನು ಹಲವಾರು ಉಪಸ್ಥಿತರಿದ್ದರು.
ವರದಿ : ದೇವು ಕುಚಬಾಳ ತಾಳಿಕೋಟೆ
ಸುದ್ದಿ
ನಟ ಚೇತನ್ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್‌ಐಆರ್
ಬೆಂಗಳೂರು: ‘ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎನ್ನಲಾದ ಆರೋಪದಡಿ ನಟ ಚೇತನ್ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಎಂಬುವರು ದೂರು ನೀಡಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಚೇತನ್ ಮಾತನಾಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದೆ. ಹಿಂದೂ ಧರ್ಮ ನಾನಾ ಪ್ರವರ್ಗಗಳಲ್ಲಿ ಇರುವವರನ್ನು ಬೇರ್ಪಡಿಸಿ ಅವರಲ್ಲಿ ಧರ್ಮಾಂಧತೆಯನ್ನು ಹುಟ್ಟುಹಾಕಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಉದ್ದೇಶದಿಂದ ಚೇತನ್ ಅವರು, ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂಬುದಾಗಿ ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ.
-
Politics3 weeks ago
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಎನ್. ಎಚ್.ಶಿವಶಂಕರ್ ರೆಡ್ಡಿ
-
Politics4 weeks ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
Politics3 days ago
“ಸಿಂದಗಿ ವಲಯದ ನಲಿ-ಕಲಿ ಶಿಕ್ಷಕರಿಗೆ ಗೂಗಲ್ ಮೀಟ್ ಮೂಲಕ ತರಬೇತಿ”
-
ಸುದ್ದಿ4 weeks ago
ಹರಳಕೆರೆ ಗ್ರಾಮದಲ್ಲಿ ಹಸುವನ್ನು ಬಲಿತೆಗೆದುಕೊಂಡ ಚಿರತೆ : ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು