ಚಿಂತಾಮಣಿ : ಮನೆ ಮುಂದೆ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿ ಮಗು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ರಸ್ತೆ ಬಳಿ ನಡೆದಿದೆ.
ಮನೆ ಮುಂದೆ ಆಟವಾಡುತ್ತಿದ್ದ ಕಾರು ಪಾರ್ಕಿಂಗ್ ಮಾಡುವ ವೇಳೆ ಮಗು ಮೇಲೆ ಕಾರು ಹತ್ತಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರು ಚಾಲಕ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ವೆಂಕಟೇಶ್ವರಲು ಮತ್ತು ಮೋನಿಶಾ ದಂಪತಿಯ ಮಗು ಗ್ರಿತಿಕ್ (4) ಮೃತಪಟ್ಟ ಬಾಲಕ.