ಕಲಬುರಗಿ : ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿ ಬಂದಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರುವಾಗಲೇ ಗಡಿಕೇಶ್ವರ ಗ್ರಾಮದಲ್ಲಿ ಭಾರಿ ದೊಡ್ಡ ಸದ್ದು ಕೇಳಿಬಂದಿದೆ.
ಸಿದ್ದರಾಮಯ್ಯ ಗಡಿಕೇಶ್ವರದ ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ವೇಳೆಯಲ್ಲಿ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಸದ್ದು ಕೇಳಿ ಬಂದಿದೆ. ಕೆಲವು ದಿನಗಳಿಂದ ಕಲಬುರಗಿಯಲ್ಲಿ ಭೂಕಂಪನವಾಗುತ್ತಿದ್ದು, ಜನರಲ್ಲಿ ಆತಂಕದ ವಾತಾವರಣ ಮೂಡಿದೆ.