ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ ಜಿಲ್ಲೆಗಳ ಕೆಲವು ಕಡೆ ಮುಂದಿನ ಐದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಇಲ್ಲೂ ಕೂಡಾ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಗದಗ, ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಯ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.